Monday, June 22, 2026
spot_imgspot_img
spot_imgspot_img

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಕಾಸರಗೋಡು: ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗುದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೆರಿಯ ಚಾಳಿಂಗಲ್ ಎನ್ನಪಾರ ನಿವಾಸಿ ಫಾತಿಮಾ(18) ಎಂದು ಗುರುತಿಸಲಾಗಿದೆ. ಫಾತಿಮಾ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಫಾತಿಮಾ ಶುಕ್ರವಾರ ಕಾಲೇಜಿಗೆ ಹೋಗಿರಲಿಲ್ಲ. ಸಂಜೆ ಕಾಞಂಗಾಡ್‌ನಿಂದ ತಾಯಿ ಮತ್ತು ಅವರ ಸಹೋದರಿ ಹಿಂದಿರುಗಿದಾಗ ಫಾತಿಮಾ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಗಲ್ಫ್ ವ್ಯಕ್ತಿಯೊಂದಿಗೆ ವಿವಾಹ
ಫಾತಿಮಾಳಿಗೆ ಇತ್ತೀಚೆಗಷ್ಟೇ ಗಲ್ಫ್ ವ್ಯಕ್ತಿಯೊಂದಿಗೆ ವಿವಾಹವಾಗಿತ್ತು. ಮದುವೆಯ ನಂತರ ನನ್ನ ಓದು ನಿಲ್ಲುತ್ತದೆ ಎಂಬ ಆತಂಕದಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಾತಿಮಾಳ ತಂದೆ ಶಂಶುದ್ದೀನ್ ಕೋವಿಡ್ ಸಮಯದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು. ಮನೆಮಗಳ ಅಗಲುವಿಕೆ ಕುಟುಂಬಸ್ಥರನ್ನು ಕಣ್ಣೀರಲ್ಲಿ ಮುಳುಗಿಸಿದೆ.

- Advertisement -

Related news

error: Content is protected !!