Sunday, August 9, 2026
spot_imgspot_img
spot_imgspot_img

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್!

- Advertisement -
- Advertisement -
driving

ಮಂಗಳೂರು: ಜಿಲ್ಲೆಯ ಮೂಡುಬಿದಿರೆಯಲ್ಲಿ‌ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಮಿತ್ ರಾಜ್ ಹಾಗೂ ಸಂದೀಪ್ ಪೂಜಾರಿ ಎನ್ನಲಾಗಿದೆ.

ಘಟನೆಯ ವಿವರ:
ಮೂಡುಬಿದ್ರೆಯ ಹೊರವಲಯದಲ್ಲಿ ಮುಸ್ಲಿಂ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಹಿಂದೂ ಯುವತಿಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದದನ್ನು ಕಂಡ ಎಂಟು ಜನರ ತಂಡವೊಂದು, ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ದೂರಲಾಗಿದೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354, 153A, 504, 506ರಡಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!