Thursday, April 25, 2024
spot_imgspot_img
spot_imgspot_img

ಮಂಗಳೂರು: ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ‌ – NIA ಗೆ ಅಧಿಕೃತವಾಗಿ ತನಿಖೆ ಹಸ್ತಾಂತರ

- Advertisement -G L Acharya panikkar
- Advertisement -

ಮಂಗಳೂರು ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ‌ವನ್ನು ಎನ್ ಐ ಎ ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್​ ಶಶಿಕುಮಾರ್​​ ಅವರು ಅಧಿಕೃತವಾಗಿ ಎನ್​ಐಎ ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.

ನವೆಂಬರ್​ 20ರಂದು ಮಂಗಳೂರಿನ ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್‌, ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಶಾರಿಕ್ ಒಬ್ಬ ಶಂಕಿತ ಉಗ್ರನೆಂಬ ಬಗ್ಗೆ ಬಲವಾದ ಸಾಕ್ಷ್ಯಗಳು, ಅನುಮಾನಗಳು ವ್ಯಕ್ತವಾಗಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೊಲೀಸರು ಪ್ರಾಥಮಿಕ ತನಿಖೆ ಮಾಡಿದ್ದಾರೆ. ಈ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಆಧರಿಸಿ ರಾಜ್ಯ ಸರ್ಕಾರ ಯುಎಪಿಎ ಕಾಯ್ದೆ ಅನ್ವಯ ಎನ್ಐಎ ತನಿಖೆ ನಡೆಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಸದ್ಯ ಈಗ ಮಂಗಳೂರು ಪೊಲೀಸ್ ಕಮಿಷನರ್​ ಶಶಿಕುಮಾರ್​​ ಅವರು ಅಧಿಕೃತವಾಗಿ ಎನ್​ಐಎ ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ. ಹೀಗಾಗಿ ಇಂದಿನಿಂದಲೇ ಎನ್​ಐಎ ಅಧಿಕಾರಿಗಳು ತನಿಖೆಯನ್ನು ಮುಂದುವರೆಸಲಿದ್ದಾರೆ.

ಎನ್​ಐಎ ಅಧಿಕಾರಿಗಳ ತನಿಖೆ ಇಂದಿನಿಂದ ಆರಂಭವಾಗಲಿದೆ. ಈಗಾಗಲೇ ಪೊಲೀಸರು ಶಾರಿಕ್ ಹೇಳಿಕೆಯನ್ನು ಖುದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್​ ಎನ್​.ಶಶಿಕುಮಾರ್​​, ತನಿಖಾಧಿಕಾರಿ ಪಿ.ಎ.ಹೆಗ್ಡೆ ನೇತೃತ್ವದಲ್ಲೇ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿದೆ. NIA ಅಧಿಕಾರಿಗಳು ಇಂದಿನಿಂದ ಪ್ರತ್ಯೇಕ ಹೇಳಿಕೆ ಪಡೆಯಲಿದ್ದಾರೆ.

- Advertisement -

Related news

error: Content is protected !!