Sunday, May 19, 2024
spot_imgspot_img
spot_imgspot_img

ಮಂಗಳೂರು: ಅಪಘಾತ ಸಂಬಂಧಿ ದಾಖಲಾತಿಗಳ ಸಂಗ್ರಹಕ್ಕೆ ಜಿಲ್ಲಾಧಿಕಾರಿ ಸೂಚನೆ

- Advertisement -G L Acharya panikkar
- Advertisement -
suvarna gold

ಮಂಗಳೂರು: ದ್ವಿ ಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ಪ್ರತಿದಿನ ನಡೆಯುವ ರಸ್ತೆ ಅಪಘಾತಗಳು, ಗಾಯಗೊಂಡ, ಸಾವು ಸಂಭವಿಸಿದ, ಅಪಘಾತ ನಡೆದ ವೇಳೆ, ಹೆಲ್ಮೆಟ್ ಧಾರಣೆ, ಸೀಟ್ ಬೆಲ್ಟ್ ಹಾಕಿದ್ದ ಅಥವಾ ಇಲ್ಲವೆ, ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದರೋ ಎಂಬುದು ಸೇರಿದಂತೆ ಸಮಗ್ರ ಮಾಹಿತಿ ದೊರೆಯಬಲ್ಲ ದಾಖಲೆಯನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

vtv vitla
vtv vitla

ಅವರು ಜ.10ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ರೀತಿಯ ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಿ, ಸಿದ್ಧಪಡಿಸಿಟ್ಟು ಕೊಂಡರೆ ಮುಂದೆ ಈ ರೀತಿಯ ಅಪಘಾತಗಳು ನಡೆಯದಂತೆ ಕ್ರಮ ವಹಿಸಬಹುದಾಗಿದೆ, ಪೊಲೀಸ್ ಹಾಗೂ ಸಾರಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಲು ತಿಳಿಸಿದರು.ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಸೂಕ್ತವಾಗಿ ಹಾಕಬೇಕು, ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಲು ಒಂದು ಉಪಸಮಿತಿಯನ್ನು ರಚಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ಗಳು ರಸ್ತೆ ಬದಿಯಲ್ಲಿ ವ್ಯವಸ್ಥಿತವಾಗಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕು, ಈ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳನ್ನು ನೀಡಬಾರದು, ಈ ಬಸ್ ಗಳಿಂದ ಸಮಸ್ಯೆಗಳು ಉದ್ಭವವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು.

ಟ್ರಾಫಿಕ್ ಸಿಗ್ನಲ್ ಗಳನ್ನು ಉಲ್ಲಂಘಿಸುವವರ ಮೇಲೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣದ ಕಾಮಗಾರಿಗಳ ಕಚ್ಚಾವಸ್ತುಗಳನ್ನು ರಸ್ತೆಯಲ್ಲಿ ಹಾಕದಂತೆ ಎಚ್ಚರ ವಹಿಸಬೇಕು, ಒಂದು ವೇಳೆ ರಸ್ತೆ ಬದಿಗೆ ಸಾಮಗ್ರಿಗಳನ್ನು ಹಾಕಿದ್ದಲ್ಲಿ ಕಂಟ್ರಾಕ್ಟರ್ ಗಳ ವಿರುದ್ದ ದೂರು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

vtv vitla

ಸಂಚಾರಿ ನಿಯಮಗಳ ಬಗ್ಗೆ ಪ್ರೌಢಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು, ಝೀಬ್ರ ಕ್ರಾಸಿಂಗ್, ಉತ್ತಮ ಹೆಲ್ಮೆಟ್ ಧಾರಣೆ ಸೇರಿದಂತೆ, ಸಂಚಾರಿ ನಿಯಮಗಳನ್ನು ಅವರಿಗೆ ತಿಳಿ ತಿಳಿಸಿಕೊಡಬೇಕು, ಆ ಮಾಹಿತಿಯುಳ್ಳ ಪುಸ್ತಕ ಮುದ್ರಿಸಿ ನೀಡಬೇಕು, ಆ ಪುಸ್ತಕದ ಕಂಟೆಂಟ್ ಸಿದ್ಧಪಡಿಸಲು ಈ ಬಗ್ಗೆ ಅಪಾರ ಜ್ಞಾನವುಳ್ಳ ತಜ್ಞರೊಬ್ಬರ ನ್ನು ನೇಮಿಸಿಕೊಂಡು ಅವರ ನೆರವನ್ನು ಪಡೆಯಬೇಕು ಎಂದು ತಿಳಿಸಿದರು.

ಶಾಲಾ ಬಸ್ ಗಳು ಹಾಗೂ ವಿದ್ಯಾರ್ಥಿಗಳನ್ನು ಕರೆತರುವ ಆಟೋಗಳ ಫಿಟ್ನೆಸ್ ಅನ್ನು ತಪಾಸಣೆಗೆ ಒಳಪಡಿಸಬೇಕು, ಆ ವಾಹನಗಳ ಮಾನದಂಡವನ್ನು ಪರಿಶೀಲಿಸಲು ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಮೂರನೇ ಶನಿವಾರ ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಬೇಕು, ವಾಹನಗಳಿಗೆ ಹಳದಿ ಬಣ್ಣ, ಸ್ಪೀಡ್ ಗವರ್ನರ್, ಬಸ್ಸಿನ ಸಾಮರ್ಥ್ಯ ಇತ್ಯಾದಿ ಅಂಶಗಳನ್ನು ಪರಿಶೀಲಿಸಬೇಕು, ಆಟೋದವರಿಗೆ ತರಬೇತಿಯನ್ನು ಆಯೋಜಿಸಿ ಮಕ್ಕಳ ಸುರಕ್ಷತೆ ಬಗ್ಗೆ ಕಡ್ಡಾಯವಾಗಿ ವಹಿಸಬೇಕಾದ ಕ್ರಮಗಳನ್ನು ತಿಳಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

vtv vitla
vtv vitla

ಶಾಸಕರಾದ ಡಾ. ಭರತ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ಆರ್.ಎಂ. ವರ್ಣೇಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್, ಎಸಿಪಿ ನಟರಾಜ್, ಕೆ.ಎಸ್.ಆರ್.ಟಿ.ಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಕ ಎಂಜಿಯರ್ ಯಶವಂತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!