Thursday, May 2, 2024
spot_imgspot_img
spot_imgspot_img

ಮಂಗಳೂರು: ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

- Advertisement -G L Acharya panikkar
- Advertisement -

ಮಂಗಳೂರು: ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿಯ ಅಪಾರ್ಟ್ಮೆಂಟ್ ವೊಂದರ 5ನೇ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿಯೋರ್ವಳು ಮೃತಪಟ್ತಿರುವ ಬಗ್ಗೆ ವರದಿಯಾಗಿದೆ. ಮಹಮದ್ ಇಂತಿಯಾಜ್ ಅವರ ಪುತ್ರಿ ಸೆಹರ್ ಇಂತಿಯಾಜ್ (15) ಮೃತಪಟ್ಟ ವಿದ್ಯಾರ್ಥಿನಿ.

ಮನೆಯ ಹಾಲ್ ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್ ಗಳನ್ನು ಸರಿ ಮಾಡುವ ಸಲುವಾಗಿ ಕುರ್ಚಿಯ ಮೇಲೆ ಹತ್ತಿ ಸರಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಆಯತಪ್ಪಿ ಕಟ್ಟಡದ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು ಪ್ರಜ್ಞಾಹೀನಳಾಗಿದ್ದಳು. ತಕ್ಷಣ ಆಕೆಯನ್ನು ಮನೆ ಮಂದಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಹರ್ ಇಂತಿಯಾಜ್ ಇವರು ಬಿಜೈ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆಯು ಸುಮಾರು 50ರಿಂದ 60 ಅಡಿ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಎಡಕಾಲು ಮುರಿತವಾಗಿದ್ದು ತಲೆಗೆ ಮತ್ತು ಮೈಕೈಗೆ ಒಳಪೆಟ್ಟು ಗಳಾಗಿವೆ ಎಂದು ವರದಿಯಾಗಿದೆ.

- Advertisement -

Related news

error: Content is protected !!