Friday, May 17, 2024
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತರ ಬಳಸಿ ವೇಶ್ಯಾವಾಟಿಕೆ ಪ್ರಕರಣ -ಬಂಧಿತರ ಸಂಖ್ಯೆ 16ಕ್ಕೆ ಏರಿಕೆ

- Advertisement -G L Acharya panikkar
- Advertisement -

ಮಂಗಳೂರು: ನಗರದ ನಂದಿಗುಡ್ಡದಲ್ಲಿರುವ ಫ್ಲ್ಯಾಟ್‌ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಈ ಸಂಬಂಧ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಮಾರ್ಚ್ 18 ರಂದು ಉಳ್ಳಾಲದ ಅಬ್ದುಲ್ ರಾಝೀಕ್ ಉಳ್ಳಾಲ್ (44) ಅಲಿಯಾಸ್ ರಫೀಕ್ ಉಳ್ಳಾಲನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಲ್ಲಿ ತೊಡಗಿರುವ ದಂಧೆಗೆ ಸಂಬಂಧಿಸಿದಂತೆ ಒಟ್ಟು 16 ಜನರನ್ನು ಇದುವರೆಗೆ ಬಂಧಿಸಲಾಗಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸಿಸಿಬಿ ತಿಳಿಸಿದೆ.

ಮಂಗಳೂರು : ಅಪಾರ್ಟ್‌ಮೆಂಟ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ : ಮೂವರು ಪಿಂಪ್ ಗಳ ಬಂಧನ..!!

ಹೈಟೆಕ್ ವೇಶ್ಯಾವಾಟಿಕೆ ದಂಧೆ ಪ್ರಕರಣ; ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ನಾಲ್ವರು ಆರೋಪಿಗಳ ಬಂಧನ..!

- Advertisement -

Related news

error: Content is protected !!