Sunday, June 7, 2026
spot_imgspot_img
spot_imgspot_img

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು : ಮುಲ್ಕಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಅಶ್ವತ್ ಶೆಟ್ಟಿಗಾರ್ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಮಣಿಪಾಲ ಲಾಡ್ಜ್ ಒಂದರಲ್ಲಿ ಅತ್ಯಾಚಾರ ಮಾಡಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಯುವತಿಯ ಮನೆಯವರು ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!