Sunday, May 5, 2024
spot_imgspot_img
spot_imgspot_img

ಮಂಗಳೂರು: ಅ.31ರಿಂದ ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ವಿಮಾಣ ನಿಲ್ದಾಣಕ್ಕೆ ತೆರಳಲು ಬಸ್‌ ವ್ಯವಸ್ಥೆ ಇಲ್ಲದೇ ಜನರು ಖಾಸಗಿ ವಾಹನಗಳನ್ನು ಬಳಸುತ್ತಿದ್ದು, ದುಬಾರಿ ವೆಚ್ಚವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಕರಾವಳಿಯ ಜನತೆಗೆ ಶುಭ ಸುದ್ದಿಯೊಂದನ್ನು ಕೆಎಸ್‌ಆರ್‌ಟಿಸಿ ನೀಡಿದೆ. ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಅ.31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ.

ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ.

ಮಂಗಳೂರು ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ. ಒಬ್ಬರಿಗೆ 100 ರೂ. ದರ ನಿಗದಿ ಪಡಿಸಲಾಗಿದೆ.

ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7.15, 8.45, ಸಂಜೆ 5.15ಕ್ಕೆ ಹೊರಡಲಿದೆ. ವಿಮಾನ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 10.45, ಮಧ್ಯಾಹ್ನ 12.30 ಮತ್ತು ರಾತ್ರಿ 9.15ಕ್ಕೆ ಹೊರಡಲಿದೆ. 300 ರೂ. ನಿಗದಿ ಮಾಡಲಾಗಿದೆ.

ಮಂಗಳೂರಿನಿಂದ ಮಣಿಪಾಲಕ್ಕೆ ಬಸ್‌ ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್‌ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ಮೊಟಕುಗೊಂಡಿತ್ತು. ಈಗ ಮತ್ತೆ ಈ ದಾರಿಯಲ್ಲಿ 2 ಟ್ರಿಪ್‌ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್‌ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲ ದಿಂದ ಮಂಗಳೂರಿಗೆ ಒಂದು ಟ್ರಿಪ್‌ ನಡೆಸಲಿದೆ ಟಿಕೆಟ್‌ ದರ 150 ರೂ. ನಿಗದಿಪಡಿಸಲಾಗಿದೆ.

- Advertisement -

Related news

error: Content is protected !!