Thursday, April 18, 2024
spot_imgspot_img
spot_imgspot_img

ಮಂಗಳೂರು: ಆಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು!

- Advertisement -G L Acharya panikkar
- Advertisement -

ಮಂಗಳೂರು: ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿ ಕುಂಪಲದ ಚರಣ್ (31) .

ಸೋಮವಾರದಂದು ದೇರಳಕಟ್ಟೆಯಿಂದ ಮಂಗಳೂರಿಗೆ ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡಚಣೆಯಾಗುವಂತೆ ಆರೋಪಿ ಚರಣ್ ತಾನು ಚಲಾಯಿಸುತ್ತಿದ್ದ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿದ್ದಾನೆ. ಇದನ್ನು ಆಂಬುಲೆನ್ಸ್‌ನಲ್ಲಿದ್ದವರು ವೀಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ಕೇಳಿಬಂದಿದೆ. ಮಂಗಳವಾರದಂದು ಪೊಲೀಸರು ಆರೋಪಿಯನ್ನು ಹಾಗೂ ಆತನ ಕಾರನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!