Sunday, June 29, 2025
spot_imgspot_img
spot_imgspot_img

ಮಂಗಳೂರು: ಆಟೋರಿಕ್ಷಾ ಸ್ಫೋಟ ಪ್ರಕರಣ; ಸ್ಫೋಟವು ಆಕಸ್ಮಿಕವಲ್ಲ, ಭಯೋತ್ಪಾದನೆಯ ಕೃತ್ಯ: ಡಿಜಿಪಿ

- Advertisement -
- Advertisement -

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು “ಭಯೋತ್ಪಾದಕತೆ” ತಿರುವು ಪಡೆದಿದೆ.

“ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ . ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ” ಎಂದು ಡಿಜಿಪಿ ಭಾನುವಾರ ಟ್ವಿಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು ವಿಧಿ ವಿಜ್ಞಾನ ತಂಡ ಪರೀಕ್ಷೆಗೊಳಪಡಿಸಿದೆ.

vtv vitla
- Advertisement -

Related news

error: Content is protected !!