Tuesday, May 7, 2024
spot_imgspot_img
spot_imgspot_img

ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ; ಎಂಜಿನಿಯರ್‌ಗೆ 26.5 ಲಕ್ಷ ದಂಡ ಹಾಗೂ 4 ವರ್ಷ ಜೈಲು ಶಿಕ್ಷೆ..!

- Advertisement -G L Acharya panikkar
- Advertisement -

ಮಂಗಳೂರು: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್‌ ಎನ್‌.ಕೆ.ಪದ್ಮನಾಭಗೆ 26.5 ಲಕ್ಷ ದಂಡ ಹಾಗೂ 4 ವರ್ಷಗಳ ಕಾರಾಗೃಹವಾಸ ಶಿಕ್ಷೆಯನ್ನು ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ವಿಧಿಸಿದೆ.

ಇಂಜಿನಿಯರ್ ಪದ್ಮನಾಭ ಎನ್ .ಕೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದು ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇವರ ವಿರುದ್ದ 2015 ರಲ್ಲಿ ಪ್ರಕರಣ ದಾಖಲಾಗಿತ್ತು. 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ 50 ಸಾವಿರ ರೂ. ದಂಡ ಮತ್ತು ದಂಡ ಕಟ್ಟಲು ವಿಫಲನಾದರೆ ಮತ್ತೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಬಿ.ಬಿ.ಜಕಾತಿ ಅಂತಿಮ ತೀರ್ಪು ನೀಡಿದ್ದಾರೆ.

ಆರೋಪಿ ಪ್ರಸ್ತುತ ಮೂಡುಬಿದಿರೆ ಪುರಸಭೆಯಲ್ಲಿ ಎಂಜಿನಿಯರ್ ಆಗಿದ್ದಾನೆ.

- Advertisement -

Related news

error: Content is protected !!