Wednesday, July 22, 2026
spot_imgspot_img
spot_imgspot_img

ಮಂಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..!

- Advertisement -
- Advertisement -

ಮಂಗಳೂರು: ಶಿಕ್ಷಕರ ತರಬೇತಿ ಕೇಂದ್ರದೊಳಗೆ ನುಗ್ಗಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್(31) ಆತ್ಮಹತ್ಯೆಗೆ ಯತ್ನಿಸಿದಾತ.

ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಬೆಡ್ ಶೀಟ್ ಬಳಸಿ ಕಿಟಕಿಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಎರಡು ದಿನಗಳ ಹಿಂದೆ ಆರೋಪಿ ಮಾನಸಿಕ ತೊಂದರೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಆರೋಪಿ ನವೀನ್ ಕುಂದಾಪುರ ನ್ಯಾಯಾಲಯದಲ್ಲಿ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ವೈಯುಕ್ತಿಕ ದ್ವೇಷದ ಕಾರಣದಿಂದಾಗಿ ಸರಕಾರಿ ಕಚೇರಿಗೆ ನುಗ್ಗಿ ದಾಳಿ ನಡೆಸಿದ್ದ. ಬಳಿಕ ಆರೋಪಿಯನ್ನು ಪೊಲೀಸರು ಬಂದಿಸಿದ್ದರು.

- Advertisement -

Related news

error: Content is protected !!