Saturday, June 6, 2026
spot_imgspot_img
spot_imgspot_img

ಮಂಗಳೂರು: ಉರೂಸ್ ಸ್ಥಳದಲ್ಲಿ ಜೈಂಟ್ ವೀಲ್ ಅಪಘಾತ – ಆರು ಮಂದಿಗೆ ಗಾಯ

- Advertisement -
- Advertisement -

ಮಂಗಳೂರು: ಉಳ್ಳಾಲ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಮಕ್ಕಳು ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಗಾಯಗೊಂಡವರೆಲ್ಲರೂ ಉಳ್ಳಾಲದ ಅಲೇಕಲ ಮೂಲದ ಉಮ್ಮರ್ ಫಾರೂಕ್ (42), ಮೊಹಮ್ಮದ್ ತಯ್ಯಬ್ (7), ಮಶಿತಾ (18), ನೂರ್ಜಾನ್ (36), ಸಲೀಕಾ (28) ಮತ್ತು ಸಮೀರ್ (41) ಎಂದು ಗುರುತಿಸಲಾಗಿದೆ.

ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಮಕ್ಕಳು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿದ್ದರು. ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ಮಕ್ಕಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಗಾಯಾಳು ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೋಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!