Friday, June 5, 2026
spot_imgspot_img
spot_imgspot_img

ಮಂಗಳೂರು: ಐಸ್ ಕ್ರೀಮ್ ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ನಷ್ಟ!!

- Advertisement -
- Advertisement -

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

ತಡರಾತ್ರಿ ಐಸ್ ಕ್ರೀ ಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಬಳಿಕ ಸನಿಹದಲ್ಲಿದ್ದ ವಾಹನಕ್ಕೂ ಬೆಂಕಿ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ. ತಕ್ಷಣ ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಹತ್ತಲು ನಿಖರ ಕಾರಣಗಳುನ್ನು ಇನ್ನಷ್ಟೆ ತಿಳಿಯಬೇಕಿದೆ.

- Advertisement -

Related news

error: Content is protected !!