Thursday, September 24, 2026
spot_imgspot_img
spot_imgspot_img

ಮಂಗಳೂರು: ಕಳವು ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು; ಸಾವಿನ ಕುರಿತು ಸೂಕ್ತ ತನಿಖೆಗೆ ಕುಟುಂಬಸ್ಥರ ಮನವಿ

- Advertisement -
- Advertisement -

ಮಂಗಳೂರು: ಮಂಗಳೂರಿನ ಜ್ಯೋತಿ ಸರ್ಕಲ್ ಬಳಿ ನಡೆದ ಕಳ್ಳತನವೊಂದಕ್ಕೆ ಸಂಬಂಧಿಸಿ ಬಂಧಿಸಲಾದ ಆರೋಪಿಯೋರ್ವ ಆಸ್ಪತ್ರೆಗೆ ರವಾನಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಫೆಬ್ರವರಿ 18ರ ಶುಕ್ರವಾರ ಸಂಭವಿಸಿದೆ. ರಾಜೇಶ್ ಎಂಬಾತ ಮೃತ ಯುವಕನಾಗಿದ್ದಾನೆ.

ಸ್ಮಾರ್ಟ್ ಸಿಟಿಗೆ ಸೇರಿದ ಕಬ್ಬಿಣದ ವಸ್ತುಗಳ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನದ ಬಗ್ಗೆ ಲಭಿಸಿದ ಮಾಹಿತಿ ಹಿನ್ನೆಲೆ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಕಳ್ಳತನದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಆರೋಪಿಗಳನ್ನು ರವಾನಿಸಲಾಗಿತ್ತು.

vtv vitla
vtv vitla

ಸಂಜೆಯ ಹೊತ್ತು ಓರ್ವ ಆರೋಪಿಗೆ ಎದೆನೋವು ಕಾಣಿಸಿಕೊಂಡಿತ್ತು. ಆರೋಪಿ ಉರ್ವ ಬಳಿಯ ನಿವಾಸಿ ರಾಜೇಶ್ ಎಂಬಾತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲು ಪೊಲೀಸರು ರವಾನಿಸಿದ್ದರು. ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ವೇಳೆ ಮೃತ ಹೊಂದಿರುವ ಬಗ್ಗೆ ಮಾಹಿತಿ ಲಭಿಸಿಸಿತ್ತು. ಮೃತ ಆರೋಪಿಯ ಕುಟುಂಬಸ್ಥರು ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಮನವಿ ಮಾಡಿಕೊಂಡಿದ್ದಾರೆ. ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!