Saturday, June 13, 2026
spot_imgspot_img
spot_imgspot_img

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಭೇಟೆ..! ಎರಡು ದಿನದಲ್ಲಿ ಬರೋಬ್ಬರಿ 55.39 ಲಕ್ಷ ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ

- Advertisement -
- Advertisement -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಭೇಟೆ ನಡೆಸಿದ್ದಾರೆ. ಎರಡು ದಿನಗಳಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದಾರೆ. ಸೋಮವಾರ ಮತ್ತು ಮಂಗಳವಾರ ಎರಡು ಪ್ರಕರಣಗಳಲ್ಲಿ ಒಟ್ಟು 55.39 ಲಕ್ಷ ರೂ ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ದುಬೈನಿಂದ ಬಂದಿದ್ದ ಮೂವರು ಚಪ್ಪಲಿ ಮತ್ತು ಬನಿಯಾನ್ ನಲ್ಲಿ ಪೇಸ್ಟ್ ರೂಪದಲ್ಲಿ 24ಕ್ಯಾರೆಟ್ ಪರಿಶುದ್ದತೆಯ 897 ಗ್ರಾಂ ತೂಕದ 45,65,730 ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದು ಮೂವರನ್ನು ಬಂಧಿಸಲಾಗಿದೆ.

ಮಂಗಳವಾರ ದುಬೈನಿಂದ ಬಂದಿದ್ದ ಕಾಸರಗೋಡಿನ ವ್ಯಕ್ತಿ 9.74 ಲಕ್ಷ ರೂ ಮೌಲ್ಯದ 190.250 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!