Friday, April 26, 2024
spot_imgspot_img
spot_imgspot_img

ಮಂಗಳೂರು: ಕಾಂಗ್ರೇಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

- Advertisement -G L Acharya panikkar
- Advertisement -

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ತತ್ವ, ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿಯವರ ಬಲಿಷ್ಟ ನೇತೃತ್ವ, ಸಿಎಂ ಯಡಿಯೂರಪ್ಪನವರ ಮಾದರಿ ಆಡಳಿತ, ಪಕ್ಷದ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ದಕ್ಷ ಮಾರ್ಗದರ್ಶನ ಹಾಗೂ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತಗೊಂಡು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅನೇಕ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್ ಸದಸ್ಯರಾದ ಉದಯ ಭಟ್, ಮಾಜಿ ಸದಸ್ಯರಾದ ಲೋಲಾಕ್ಷ, ಇನ್ನಿತರರ ಪ್ರಮುಖರಾದ ರುಕ್ಕಯ್ಯ , ಸಂತೋಷ್, ಯಶವಂತ್, ಧೀರಜ್, ಗಣೇಶ್ ಕೊಟ್ಟಾರಿ,ಕಮಲಾಕ್ಷ, ರಾಜೇಶ್, ಗಂಗಾಧರ್, ಅಭಿಷೇಕ್ ಸಹಿತ ಅನೇಕರು ಬಿಜೆಪಿಗೆ ಸೇರ್ಪಡೆಗೊಂಡರು.

ಇವರ ಸೇರ್ಪಡೆಯಿಂದ ಆ ಭಾಗದಲ್ಲಿ ಪಕ್ಷ ಮತ್ತಷ್ಟು ಬಲಿಷ್ಟವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ, ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

- Advertisement -

Related news

error: Content is protected !!