Friday, April 26, 2024
spot_imgspot_img
spot_imgspot_img

ಮಂಗಳೂರು: ಕಾಣೆಯಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಮಂಗಳೂರು: ಇಲ್ಲಿನ ಶಕ್ತಿನಗರದ ಅಂಚೆ ಕಚೇರಿ ಬಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ವ್ಯಕ್ತಿ ಶಕ್ತಿನಗರದ ಪ್ರಶಾಂತಿ ನಗರದ ನಿವಾಸಿ ಸದಾನಂದ (31) ಎನ್ನಲಾಗಿದೆ.

ಕಳೆದ ಒಂದು ವಾರದ ಹಿಂದೆ ಸದಾನಂದ ಅವರು ನಾಪತ್ತೆಯಾಗಿದ್ದರು. ಮದ್ಯ ಸೇವನೆ ಚಟ ಹೊಂದಿದ್ದರಿಂದ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಗೂ ಬರುತ್ತಿರಲಿಲ್ಲ ಹೀಗಾಗಿ ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿರಲಿಲ್ಲ.

ಆದರೆ ಸ್ಥಳೀಯರಿಗೆ ಕಳೆದ ಎರಡು ದಿನಗಳಿಂದ ಅಂಚೆ ಕಚೇರಿ ಪರಿಸರದಲ್ಲಿ ದುರ್ವಾಸನೆ ಬರುತ್ತಿದ್ದ ಕಾರಣ ಆ ಸ್ಥಳಕ್ಕೆ ಹೋಗಿ ನೋಡಿದಾಗ ಕೊಳೆದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಸ್ಥಳದಲ್ಲಿ ಕಾಡು ಬೆಳೆದಿದ್ದ ಕಾರಣ ತಕ್ಷಣ ಯಾರ ಗಮನಕ್ಕೂ ಬಂದಿರಲಿಲ್ಲ. ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಮನೆಯವರು ಸ್ಥಳಕ್ಕೆ ಬಂದು ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಮೃತದೇಹವನ್ನು ಬಳಿಕ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!