Sunday, April 28, 2024
spot_imgspot_img
spot_imgspot_img

ಮಂಗಳೂರು: ಕಾರು ಚಾಲಕನ ಕೊಲೆ ಪ್ರಕರಣ; ವಿಟ್ಲ ಮೂಲದ ಶರತ್ ಸಹಿತ ನಾಲ್ವರ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಸ್ಟೇಟ್‌ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಕಾರು ಚಾಲಕ ಜನಾರ್ದನ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು‌ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಕಸಬ ಅನ್ನಮೂಲೆ ಶರತ್.ವಿ(36), ಕೇರಳ ತಿರುವನಂತಪುರ ಪುಲ್ಲಂಪಾರ ಮೂಲದ ಪ್ರಶಾಂತ್(40), ಕುಶಾಲ ನಗರದ ಜಿ.ಕೆ ರವಿಕುಮಾರ್ ಆಲಿಯಾಸ್‌ ನಂದೀಶ(38), ಕೊಣಾಜೆ ಅಂಬ್ಲಮೊಗರು ಮದಕ ವಿಜಯ ಕುಟಿನ್ಹಾ(28) ಬಂಧಿತ ಆರೋಪಿಗಳು.

ಏ.18ರಂದು ಸಂಜೆ ಸ್ಟೇಟ್‌ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಲಗಿದ್ದ ಜನಾರ್ದನ ಪೂಜಾರಿ ಅವರ ಹತ್ತಿರ ಬಂದು ಆರೋಪಿಗಳು ಜನಾರ್ದನ ಅವರ ಮೊಬೈಲ್‌ ಕೊಡುವಂತೆ ಹೇಳಿದ್ದಾರೆ. ಇದೇ ಮಾತಿಗೆ ಆರೋಪಿಗಳ ಜೊತೆ ಘರ್ಷಣೆ ಉಂಟಾಗಿದೆ. ಈ ವೇಳೆ ಒಬ್ಬಾತ ತನ್ನ ಕಾಲಿನಿಂದ ಜನಾರ್ದನ ಪೂಜಾರಿ ಅವರ ಎದೆಗೆ ಒದ್ದಾಗ ಅವರು ಸುಮಾರು 6 ಅಡಿ ಮೇಲಿನಿಂದ ಕೆಳಗಡೆ ಬಿದ್ದಿದ್ದಾರೆ. ಬಳಿಕ ಪುನಃ ನಾಲ್ಕು ಜನ ಆರೋಪಿಗಳು ಜನಾರ್ದನ ಪೂಜಾರಿ ಅವರು ಬಿದ್ದಿದ್ದಲ್ಲಿಗೆ ಹೋಗಿ, ತಮ್ಮ ಕೈಗಳಿಂದ ಜನಾರ್ದನ ಪೂಜಾರಿ ಅವರಿಗೆ ಹಲ್ಲೆ ಮಾಡಿ ತಮ್ಮ ಕಾಲಿನಿಂದ ತುಳಿದು ಕೊಲೆಯನ್ನು ಮಾಡಿದ್ದಾರೆ. ಈ ಬಗ್ಗೆ ಜನಾರ್ದನ ಪೂಜಾರಿ ರವರ ಅಣ್ಣ ಉಮೇಶ್ ಪೂಜಾರಿ ದೂರು ನೀಡಿದ್ದಾರೆ.

ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಾಗಿರುವ ಆರೋಪಿಗಳ ಮೇಲೆ ಈಗಾಗಲೇ ಹಲವು ಕ್ರಿಮಿನಲ್‌ ಕೇಸ್‌ ದಾಖಲಾಗಿದ್ದು, ಜಿ.ಕೆ. ರವಿಕುಮಾರ್ ಎಂಬಾತನ ಮೇಲೆ 2009 ರಲ್ಲಿ ಕುಶಾಲನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಶರತ್ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2007 ರಲ್ಲಿ ಮನೆ ಕಳವು ಪ್ರಕರಣ, ಮಣಿಪಾಲ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ. ಈತ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದ. ಆರೋಪಿ ವಿಜಯ ಕುಟಿನ್ಹಾ ಎಂಬಾತನ ಮೇಲೆ ಕೋಣಾಜೆ ಪೊಲೀಸ್‌ ಠಾಣೆಯಲ್ಲಿ 2022 ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!