Thursday, May 16, 2024
spot_imgspot_img
spot_imgspot_img

ಮಂಗಳೂರು: ಕಾಲೇಜಿನಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್‌; ವಿದ್ಯಾರ್ಥಿಗಳು ಸಸ್ಪೆಂಡ್‌

- Advertisement -G L Acharya panikkar
- Advertisement -
vtv vitla

ಮಂಗಳೂರು: ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ ಕಾಲೇಜು ಆಂತರಿಕ ತನಿಖೆಗೆ ಆದೇಶ ನೀಡಿದೆ.

ಬುರ್ಖಾ ಧರಿಸಿ ವಿದ್ಯಾರ್ಥಿಗಳು ಮಾಡಿದ ನೃತ್ಯ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ ಬುರ್ಖಾ ಧರಿಸಿ ನೃತ್ಯ ಮಾಡಿದ್ದಾರೆ ಎಂದು ಹೇಳಿದರು.

ಅಲ್ಲದೆ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅನುಮತಿ ಇಲ್ಲದೆ ಈ ನೃತ್ಯ ಪ್ರದರ್ಶಿಸಿದ್ದಾರೆ ಎಂದು ಕಾಲೇಜು ಮಂಡಳಿ ಹೇಳಿದೆ. ಕಾಲೇಜಿನಲ್ಲಿ ಕೋಮು ಸೌಹಾರ್ದತೆ ಕದಡುವ ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

- Advertisement -

Related news

error: Content is protected !!