Friday, April 26, 2024
spot_imgspot_img
spot_imgspot_img

ಮಂಗಳೂರು : ಕಾಲೇಜ್ ವಿದ್ಯಾ ರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತದ ವಿರುದ್ದ ಕ್ರಮಕ್ಕೆ ಒತ್ತಾಯ.!

- Advertisement -G L Acharya panikkar
- Advertisement -

ಮಂಗಳೂರು : ನಗರದ ಕರಾವಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ರಾಜ್ಯದ ಎಲ್ಲೆಡೆ ಭಾರೀ ಸುದ್ದಿಯಾಗಿತ್ತು. ಹಣದೋಚುವ, ಸರಿಯಾಗಿ ಶಿಕ್ಷಣದ ವ್ಯವಸ್ಥೆ ಇಲ್ಲದ ಕರಾವಳಿ ಕಾಲೇಜಿನ ಅವ್ಯವಸ್ಥೆಯ ಬಗ್ಗೆ ಸಮಗ್ರ ತನಿಖೆ ನಡೆಸಿ, ಕಾಲೇಜು ಆಡಳಿತಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ SFI ಜಿಲ್ಲಾಧಿಕಾರಿ ಮತ್ತು ಮಂಗಳೂರು ನಗರಪೋಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ನಡೆದಿತ್ತು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮೂಲದ ಭರತ್ ಭಾಸ್ಕರ್ (20) ಎಂಬ ವಿದ್ಯಾರ್ಥಿ ನೇಣಿಗೆ ಶರಣಾದ ಪ್ರಕರಣ

ಕರಾವಳಿ ಕಾಲೇಜು ಸೇರಿದಂತೆ ಬಹುತೇಕ ಖಾಸಗೀ ಶಿಕ್ಷಣ ಸಂಸ್ಥೆಗಳು ಸರಕಾರದ ಎಲ್ಲಾ ನಿಯಮಗಳನ್ನು ಗಾಳಿಗೆತೂರಿ ದುಬಾರಿ ಶುಲ್ಕವನ್ನು ವಸೂಲಿ ಮಾಡುವ ಮೂಲಕ ವಿದ್ಯಾ ರ್ಥಿಗಳನ್ನು ಸುಲಿಗೆ ನಡೆಸುತ್ತಿವೆ. ಈ ರೀತಿ ಶುಲ್ಕದ ಹೆಸರಿನಲ್ಲಿ ಸುಲಿಗೆ, ಸರಿಯಾದ ಸಂಖ್ಯೆಯ ಶಿಕ್ಷಕರನ್ನು ನೇಮಿಸದೆ ಇರುವ ಶಿಕ್ಷಕರಿಗೆ ತಿಂಗಳ ವೇತನವನ್ನೂ ನೀಡದೆ ಸತಾಯಿಸುವುದು, ಕೊಠಡಿಗಳ ಕೊರತೆ ಹೀಗೆ ಮೊದಲಾದ ಸಮಸ್ಯೆ ಗಳು ವಿದ್ಯಾರ್ಥಿಗಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿಸುತ್ತಿವೆ ಎಂದು ಮನವಿಯಲ್ಲಿ ದೂರಲಾಗಿದೆ.

ಇಂತಹ ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮತ್ತು ಅವರ ಭವಿಷ್ಯಕ್ಕೆ ತೊಡಕಾಗುತ್ತಿವೆ. ಕಾಲೇಜಿನ ಅವ್ಯವಸ್ಥೆ , ಹಣದಾಹಿ ಆಡಳಿತ ಹಾಗೂ ಇತರ ಗಂಭೀರ ಸಮಸ್ಯೆಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಕುಗ್ಗಿಸುತ್ತದೆ. ಕೆಲ ವಿದ್ಯಾರ್ಥಿಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಯಂತಹ ಕೃತ್ಯ ಕ್ಕೆ ಮುಂದಾಗುತ್ತಾರೆ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಇದನ್ನೂ ಓದಿ: ಮಂಗಳೂರು: ವಿದ್ಯಾಭ್ಯಾಸ ಅರಸಿ ಬಂದ ವಿದ್ಯಾರ್ಥಿ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ

- Advertisement -

Related news

error: Content is protected !!