Monday, April 29, 2024
spot_imgspot_img
spot_imgspot_img

ಮಂಗಳೂರು: ಕಾಸರಗೋಡಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಂ.ಎಸ್ ಧೋನಿ

- Advertisement -G L Acharya panikkar
- Advertisement -

ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ ಇಫ್ತಿಕಾರ್ ಆತ್ಮೀಯವಾಗಿ ಸ್ವಾಗತಿಸಿದರು. ಇವರನ್ನು ನೊಡಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತನಾದ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಅಬ್ದುಲ್ ಗಫಾರ್ ಅವರ ಆತ್ಮ ಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!