Thursday, May 9, 2024
spot_imgspot_img
spot_imgspot_img

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನಿಗೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ ಸುಸಜ್ಜಿತ ಮನೆ ಹಸ್ತಾಂತರಕ್ಕೆ ಸಿದ್ಧ

- Advertisement -G L Acharya panikkar
- Advertisement -
vtv vitla

ಮಂಗಳೂರು: ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಂದರವಾಗಿ ಮನೆ ನವೀಕರಣ ಮಾಡಿ ಕೊಟ್ಟಿದೆ.

ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರನ್ನು ಇತ್ತೀಚೆಗೆ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವನ್ನು ತೋಡಿಕೊಂಡಿದ್ದರು. ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದ ಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು.

ಈ ವೇಳೆ “ಮನೆಯನ್ನು ನವೀಕರಿಸುವ ಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆ ಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ” ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತು ಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಂದರವಾಗಿ ಮನೆಯನ್ನು ನವೀಕರಿಸಿ ಕೊಟ್ಟಿದೆ‌. ಮಾರ್ಚ್ 22ರ ಯುಗಾದಿ ಹಬ್ಬದಂದು ಬೆಳಗ್ಗೆ 10 ಗಂಟೆಗೆ ಮನೆ ಹಸ್ತಾಂತರ ನಡೆಯಲಿದೆ.

ಬಾಂಬ್ ಸ್ಪೋಟದಿಂದ ಗಂಭೀರ ಗಾಯಗೊಂಡು ವಿಶ್ರಾಂತಿಯಲ್ಲಿರುವ ಪುರುಷೋತ್ತಮ ಪೂಜಾರಿಯವರ ಪಾಲಿಗೆ ಕನಸು ಈಡೇರಿದ ಖುಷಿ. ಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದ ಬೆಳಕು ಮೂಡಿದೆ.

- Advertisement -

Related news

error: Content is protected !!