Monday, June 22, 2026
spot_imgspot_img
spot_imgspot_img

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಆಟೋ ಚಾಲಕನಿಗೆ ವೈಯಕ್ತಿಕ ನೆಲೆಯಲ್ಲಿ ರೂ. 50 ಸಾವಿರ ನೆರವು ನೀಡಿದ ಗೃಹ ಸಚಿವ

- Advertisement -
- Advertisement -

ಮಂಗಳೂರು: ಮಂಗಳೂರು ಕಪಿತಾನಿಯೋ ಬಳಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ 50ಸಾವಿರ ರೂ ಧನಸಹಾಯ ನೀಡಿದ್ದರು.

ಸ್ಪೋಟ ಸಂಭವಿಸಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವರು ಬಳಿಕ ಆಸ್ಪತ್ರೆಗೆ ತೆರಳಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರ ಯೋಗಕ್ಷೇಮ ವಿಚಾರಿಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುವ ಭರವಸೆ ನೀಡಿದರು. ಇದೇ ಸಂದರ್ಭ ಅವರು ಪುರುಷೋತ್ತಮ ಅವರ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ರೂ. 50 ಸಾವಿರ ನೆರವು ಸಚಿವರು ಹಸ್ತಾಂತರಿಸಿದರು.

ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

- Advertisement -

Related news

error: Content is protected !!