Tuesday, September 15, 2026
spot_imgspot_img
spot_imgspot_img

ಮಂಗಳೂರು: ಕೆಎಂಎಫ್ ಡೈರಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿದ ಪ್ರಕರಣ; ಮಹಿಳೆ ಸೇರಿ ಮೂವರ ಬಂಧನ..!

- Advertisement -
- Advertisement -

ಮಂಗಳೂರು: ಕೆಎಂಎಫ್ ಡೈರಿಯಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋ.ರೂ. ಅಧಿಕ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರಮೇಶ್ ಪೂಜಾರಿ ಬಿ.(41), ಮಂಗಳೂರಿನ ಅಳಪೆ ಪಡೀಲ್‌ನ ಚಂದ್ರಾವತಿ (36), ಬೆಂಗಳೂರಿನ ಸುರೇಂದ್ರ ರೆಡ್ಡಿ ಜಿ.(36) ಬಂಧಿತ ಆರೋಪಿಗಳಾಗಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೆ ರಾಮ್ ಪ್ರಸಾದ್ ರಾವ್ ಪಿ. ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿದ್ದು, ಅವರ ಬಂಧನಕ್ಕೆ ಕ್ರಮ ಜರಗಿಸಲಾಗಿದೆ ಎಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!