Friday, May 3, 2024
spot_imgspot_img
spot_imgspot_img

ಮಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ; ದ.ಕ. ಜಿಲ್ಲಾಡಳಿತದಿಂದ ಹೆಚ್ಚುವರಿ ನಿಯಂತ್ರಣ ಕ್ರಮ ಜಾರಿ..!

- Advertisement -G L Acharya panikkar
- Advertisement -
suvarna gold

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಓಮಿಕ್ರಾನ್ ಪ್ರಕರಣಗಳೇ ಹೆಚ್ಚು ಅನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆಯ ಮೂಲಗಳು ದೃಢಪಡಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.

ನಿಯಂತ್ರಣ ಕ್ರಮಗಳು:

  • ಜಿಲ್ಲೆಯಾದ್ಯಂತ ರಾತ್ರಿ ಗಂಟೆ 10-00 ರಿಂದ ಬೆಳಿಗ್ಗೆ ಗಂಟೆ 5-00 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
  • ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಪ್ಯೂ ಶುಕ್ರವಾರ ರಾತ್ರಿ ಗಂಟೆ 10-00 ರಿಂದ ಸೋಮವಾರ ಬೆಳಿಗ್ಗೆ ಗಂಟೆ 5-00 ರವರೆಗೆ ಜಾರಿಯಲ್ಲಿರುತ್ತದೆ.
  • ಈ ಅವಧಿಯಲ್ಲಿ ಎಲ್ಲಾ ಕಛೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ 5 ದಿನಗಳು ಮಾತ್ರ ಕಾರ್ಯನಿರ್ವಹಿಸುವುದು.
  • ವಾರಾಂತ್ಯದ ಕರ್ಪ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ಕ್ರಮಕೈಗೊಳ್ಳುವುದು.
  • ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು 50% ಕ್ಕೆ ಮಿತಿಗೊಳಿಸಿ ಪಬ್‌ಗಳು / ಕ್ಲಬ್‌ಗಳು / ರಸ್ಟೋರೆಂಟ್‌ಗಳು ಬಾರ್‌ಗಳು / ಹೋಟೆಲ್ ಗಳು / ಹೋಟೆಲ್‌ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿಗೆ ಅನುಮತಿಸಿದೆ.
  • ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು 50% ಕ್ಕೆ ಮಿತಿಗೊಳಿಸಿ ಎಲ್ಲಾ ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್ ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಅಡಿಟೋರಿಯಮ್ ಗಳು ಮತ್ತು ಇತರ ಸಭಾಂಗಣಗಳು ಕಾರ್ಯಾಚರಿಸುವುದು.
  • ರಾಜ್ಯ ಸರಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 200 ಜನರು ಮತ್ತು ಒಳಾಂಗಣ ಪ್ರದೇಶಗಳಲ್ಲಿ ಮದುವೆಯನ್ನು ನಡೆಸಲು ಅನುಮತಿಸಿದೆ.
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅನುಮತಿಸಿದೆ. ಯಾವುದೇ ಸೇವೆ ಇತ್ಯಾದಿಗಳನ್ನು ಅನುಮತಿಸಲಾಗುವುದಿಲ್ಲ, ನಿಗದಿಪಡಿಸಲಾದ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 50 ಜನರಿಗೆ ಮಾತ್ರ ಅನುಮತಿಸಿದೆ.
  • ದಿನಗಳಲ್ಲಿ ಎಂದಿನಂತೆ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಎಲ್ಲಾ ಪ್ರತ್ಯೇಕವಾಗಿರುವ ಅಂಗಡಿಗಳು ಸೂಕ್ತ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಿದೆ.
  • ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಈಜು ಕೊಳಗಳಲ್ಲಿ ಮತ್ತು ಜಿಮ್‌ಗಳಲ್ಲಿ 50% ಸಾಮರ್ಥ್ಯ ಹೊಂದಿಕೊಂಡು ಬಳಸಲು ಅನುಮತಿಸಿದೆ.
  • 50% ಸಾಮರ್ಥ್ಯದೊಂದಿಗೆ ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳು ಕಾರ್ಯನಿರ್ವಹಿಸಲು ಅನುಮತಿಸಿದೆ.
  • ಎಲ್ಲಾ ಧರಣಿಗಳು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರ ಹೊರಡಿಸಿದ ಚಾಲ್ತಿಯಲ್ಲಿರುವ ಸುತ್ತೋಲೆ ಮಾರ್ಗಸೂಚಿಗಳನ್ವಯ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಣ್ಣಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸುವುದು.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!