Friday, June 19, 2026
spot_imgspot_img
spot_imgspot_img

ಮಂಗಳೂರು: ಕೋವಿಡ್ ಮುನ್ನೆಚ್ಚರಿಕೆ; ವೆನ್ಲಾಕ್‌ನಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌

- Advertisement -
- Advertisement -

ಮಂಗಳೂರು: ಕೋವಿಡ್‌ ಮುನ್ನೆಚ್ಚರಿಕೆಯ ಉದ್ದೇಶದಿಂದ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೋವಿಡ್‌ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ಧಗೊಳಿಸಲಾಗಿದೆ.

ವಿದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸುವ ವಿದೇಶಿ ಪ್ರಯಾಣಿಕರಲ್ಲಿ ಶೇ. 2ರಷ್ಟು ಮಂದಿಯನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈ ವೇಳೆ ಕೋವಿಡ್‌ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಕೋವಿಡ್‌ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

- Advertisement -

Related news

error: Content is protected !!