Friday, May 17, 2024
spot_imgspot_img
spot_imgspot_img

ಮಂಗಳೂರು: ಕ್ರೆಡಿಟ್ ಕಾರ್ಡ್ ಮಾಹಿತಿ ಕದ್ದು ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿ ವಂಚನೆ ಆರೋಪ; ಇಬ್ಬರು ಟಿಬೆಟಿಯನ್ನರ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಬಳಕೆದಾರರೊಬ್ಬರ ಕ್ರೆಡಿಟ್ ಕಾರ್ಡ್ ಮಾಹಿತಿ ಕದ್ದು ಅವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚನೆ ಎಸಗಿದ ಆರೋಪದಲ್ಲಿ ಮಂಗಳೂರು ಸೆನ್ ಪೊಲೀಸರು ಟಿಬಿಟಿಯನ್ ಪ್ರಜೆಗಳಿಬ್ಬರನ್ನು ನ.10 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಲೋಬಸಂಗ್‌ ಸಂಗ್ಯೆ (24) ದಕಪ ಪುಂದೇ(40) ಎನ್ನಲಾಗಿದೆ.

ವ್ಯಕ್ತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ನಿಂದ ಕ್ರೆಡಿಟ್‌ ಕಾರ್ಡ್‌ ಬಳಸುತ್ತಿದ್ದರು. ಇದರ ವಾರ್ಷಿಕ ಶುಲ್ಕ ಹೆಚ್ಚಾಗಿದ್ದರಿಂದ ಇದನ್ನು ಬ್ಯಾಂಕ್‌ಗೆ ಸೆರೆಂಡರ್‌ ಮಾಡಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಅಪರಿಚಿತರು ವ್ಯಕ್ತಿಯ ಖಾತೆಯಿಂದ ಹಂತ ಹಂತವಾಗಿ 1 ಲಕ್ಷದ 12 ಸಾವಿರ ರೂಪಾಯಿ ವರ್ಗಾಯಿಸಿದ್ದರು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು Mobikwik wallet App ಮುಖಾಂತರ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಫಿನ್‌ಕೇರ್‌ ಸ್ಮಾಲ್ ಪೈನ್ಯಾನ್ಸ್ ಬ್ಯಾಂಕ್‌ನ ಎರಡು ಖಾತೆಗಳಿಗೆ ವರ್ಗಾವಣೆಯಾಗಿರುವುದು ಮತ್ತು ಇದನ್ನು ಉತ್ತರ ಕನ್ನಡ ಜಿಲ್ಲೆಯ ತಟ್ಟ ಹಳ್ಳಿಯಲ್ಲಿರುವ ಕೆನರಾ ಡಿಸಿಸಿ ಬ್ಯಾಂಕ್‌ನ ಖಾತೆದಾರನಾದ ಲೋಬಸಂಗ್‌ ಸಂಗ್ಯೆ ಬ್ಯಾಂಗಿಸ್ ಎಂಬುವವರ ಖಾತೆಗೆ ವರ್ಗಾವಣೆಯಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಮಂಗಳೂರು 7ನೇ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

- Advertisement -

Related news

error: Content is protected !!