Friday, June 19, 2026
spot_imgspot_img
spot_imgspot_img

ಮಂಗಳೂರು: ಗಾಂಜಾ ಪ್ರಕರಣ; ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರ ಬಂಧನ

- Advertisement -
- Advertisement -
vtv vitla

ಮಂಗಳೂರು: ಪ್ರತಿಷ್ಠಿತ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಹಾಗೂ ಸೇವನೆ ಪುಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂ.ಡಿ ಓದುತ್ತಿರುವ ತುಮಕೂರಿನ ಡಾ. ಹರ್ಷ ಕುಮಾರ್, ಡಿ ಫಾರ್ಮಾ ವಿದ್ಯಾರ್ಥಿಯಾಗಿರುವ ಕೇರಳದ ಕೊಚ್ಚಿಯ ಅಡಾನ್ ದೇವ್, ಮಂಗಳೂರು ಕಸಬ ಬೆಂಗ್ರೆಯ ಮಹಮ್ಮದ್ ಅಫ್ರಾ‌ ಬಂಧಿತರು.

ನಾಲ್ಕು ಘಟನೆಗೆ ಸಂಬಂಧಿಸಿದಂತೆ ಬುಧವಾರ 10 ಮಂದಿಯನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 13ಕ್ಕೇರಿದೆ. ಮಹಮ್ಮದ್ ಅಫ್ರಾರ್‍‌ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂಗ್ಲೆಂಡ್ ನಿವಾಸಿಯಾಗಿದ್ದ ಆತ ಅನಿವಾಸಿ ಭಾರತೀಯ ಕೋಟಾ ಅಡಿ 15 ವರ್ಷಗಳಿಂದ ನಗರದಲ್ಲಿ ವಾಸವಾಗಿರುವುದು ಹಾಗೂ ನಗರದ ಪ್ರತಿಷ್ಠಿತ ದಂತ ವೈದ್ಯ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಬಿಡಿಎಸ್‌ ವಿದ್ಯಾರ್ಥಿಯಾಗಿರುವುದು ಕಂಡು ಬಂದಿತ್ತು. ಆತ ನೀಡಿದ ಮಾಹಿತಿ ಆಧಾರದ ಮೇಲೆ ಇಬ್ಬರು ವೈದ್ಯರು, ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳ ಸಹಿತ ಪೊಲೀಸರು 10 ಅವರನ್ನು ಬಂದಿಸಿದ್ದರು. ಈಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!