Monday, May 6, 2024
spot_imgspot_img
spot_imgspot_img

ಮಂಗಳೂರು: ಗಾಂಜಾ ಮಾರಾಟ; 12 ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು..!

- Advertisement -G L Acharya panikkar
- Advertisement -

ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು ದುಷ್ಟಟಗಳ ಹಾದಿ ಹಿಡಿಯುತ್ತಿದ್ದಾರೆ. ಯುವ ಜನತೆಯೆ ಗಾಂಜಾ ವ್ಯಸನಿಗಳಾಗುತ್ತಿದ್ದಾರೆ. ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ್ದ ಆರೋಪದಲ್ಲಿ ಖಾಸಗಿ ಕಾಲೇಜಿನ 12 ವಿದ್ಯಾರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಸಿಯಾ ಸೂಟರ್ ಪೇಟೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ಶಾನೂಫ್ ಅಬ್ದುಲ್ ಗಫೂರ್(21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ.(18), ಅಮಲ್(21), ಅಭಿಷೇಕ್(21), ನಿದಾಲ್(21), ಶಾಹೀದ್ ಎಂ.ಟಿ.ಪಿ.(22), ಫಹಾದ್ ಹಬೀಬ್(22), ಮುಹಮ್ಮದ್ ರಿಶಿನ್(22) ಹಾಗೂ ರಿಜಿನ್ ರಿಯಾಝ್(22) ಎನ್ನಲಾಗಿದೆ.

ಬಂಧಿತ ಆರೋಪಿಗಳು ಕೇರಳ ಮೂಲದ ವಿದ್ಯಾ ರ್ಥಿಗಳು. ಈ ಪೈಕಿ 9 ಮಂದಿ ನಗರದ ಖಾಸಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳಾದರೆ, ಮೂವರು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಇವರ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತರಿಂದ ಒಟ್ಟು 900 ಗ್ರಾಂ ತೂಕದ ರೂ. 20,000 ಮೌಲ್ಯ ದ ಗಾಂಜಾ, ಗಾಂಜಾ ಸೇದುವ ಸ್ಮೋಕಿಂಗ್ ಪೈಪ್ ಗಳು, ರೋಲಿಂಗ್ ಪೇಪರ್, 4,500 ರೂ. ನಗದು, 11 ಮೊಬೈಲ್ ಫೋನ್ ಗಳು ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ ರೂ. 2,85,000 ಎಂದು ಅಂದಾಜಿಸಲಾಗಿದೆ. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಯುವಕರು/ವಿದ್ಯಾ ರ್ಥಿಗಳು ಭಾಗಿಯಾಗಿದ್ದು , ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!