Thursday, May 2, 2024
spot_imgspot_img
spot_imgspot_img

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ; 10 ಕೆ.ಜಿ. ಗಾಂಜಾ ವಶ

- Advertisement -G L Acharya panikkar
- Advertisement -

ಮಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ವಿಜಯ ಕುಮಾರ್ ಶೆಟ್ಟಿ (24) ಬಂಧಿತ ಆರೋಪಿ. ಜನವರಿ 13 (ಇಂದು) ಬೆಳಗ್ಗೆ ನಗರದ ಕುಂಟಿಕಾನ ಕ್ರಾಸ್ ಬಳಿಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್‍ ಕಾರಿನಲ್ಲಿ ಈತ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ. ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಕಾರು ಸಹಿತ 10,200 ಕೆಜಿ ಗಾಂಜಾವನ್ನು ಸಿಸಿಬಿ ಪೊಲೀಸರು ಈ ವೇಳೆ ವಶಪಡಿಸಿಕೊಂಡಿದ್ದಾರೆ.

ಈತನನ್ನು ವಶಕ್ಕೆ ಪಡೆದು ಸುಮಾರು 2,55, ರೂಪಾಯಿ ಮೌಲ್ಯದ 10,200 ಕೆ.ಜಿ. ಗಾಂಜಾ, ಮಾರುತಿ ಸ್ವಿಪ್ಟ್ ಕಾರು, ಮೊಬೈಲ್ ಫೋನ್-1, ನಗದು ರೂ.500/- ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 5,65,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ವಿಜಯ ಕುಮಾರ್‍ ಈ ಹಿಂದೆ ಕೂಡಾ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಚಿಕ್ಕಮಗಳೂರಿನಲ್ಲಿ ಹಾಗೂ ಉಡುಪಿಯಲ್ಲಿ ಒಟ್ಟು 2 ಪ್ರಕರಣ ದಾಖಲಾಗಿದ್ದು, ಸುಮಾರು 3 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ., ಮಹೇಶ್‌ ಪ್ರಸಾದ್‌, ಪಿಎಸ್‌ಐಗಳಾದ ರಾಜೇಂದ್ರ ಬಿ., ಸುದೀಪ್ ಎಂ.ವಿ. ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!