Wednesday, July 22, 2026
spot_imgspot_img
spot_imgspot_img

ಮಂಗಳೂರು: ಚಿರತೆಯ ಪತ್ತೆಗಾಗಿ ಮುಂದುವರಿದ ಕಾರ್ಯಾಚರಣೆ

- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಪರಿಸರದಲ್ಲಿ ಭಾನುವಾರ ಸಂಜೆ ವೇಳೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದೀಗ ಅದನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಮಂಗಳವಾರವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಸೋಮವಾರ ಈ ವ್ಯಾಪ್ತಿಯಲ್ಲಿ ಮಂಗಳೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ ನೇತೃತ್ವದ ತಂಡ ಆಗಮಿಸಿ ಶೋಧ ನಡೆಸಿದಾಗ, ನಿಗೂಢ ಪ್ರಾಣಿಯ ಹೆಜ್ಜೆ ಗುರುತು ಪತ್ತೆಯಾಗಿತ್ತು. ಮಂಗಳವಾರ ಬೆಳಗ್ಗಿನಿಂದ ರಾತ್ರಿಯವರೆಗೆ ಈ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕೆಲವೊಂದು ಸ್ಥಳದಲ್ಲಿ ಮತ್ತೆ ಓಡಾಡಿದ ಹೆಜ್ಜೆ ಪತ್ತೆಯಾಗಿದೆ.

ಕಂಕನಾಡಿಯ ಕನಪದವು, ಮಾರ್ತಕಂಪೌಂಡ್, ಬಲ್ಲಾಳ್‌ಗುಡ್ಡೆ ವ್ಯಾಪ್ತಿಯಲ್ಲಿ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಅದೇ ಸ್ಥಳದಲ್ಲಿ ಬೋನು ಅಳವಡಿಸಲಾಗಿದೆ. ಇದೇ ರೀತಿ ಒಂದೆರಡು ದಿನ ಕಾರ್ಯಾಚರಣೆ ನಡೆಸಲಾಗುವುದು ಎಂದು ಪ್ರಶಾಂತ್ ಪೈ ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಜಯ್ ಪೈ, ಉಪವಲಯ ಅರಣ್ಯಾಧಿಕಾರಿ ಸಂಜಯ್, ಅರಣ್ಯ ರಕ್ಷಕ ವೀಣಾ, ಸೋಮಲಿಂಗ ಹಿಪ್ಪರಗಿ, ಶಿವು, ಉರಗ ರಕ್ಷಕ ಅತುಲ್ ಪೈ ಭಾಗವಹಿಸಿದ್ದರು.

- Advertisement -

Related news

error: Content is protected !!