Tuesday, July 1, 2025
spot_imgspot_img
spot_imgspot_img

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಮಾರಾಮಾರಿ- ಇಬ್ಬರಿಗೆ ಗಾಯ!

- Advertisement -
- Advertisement -

ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.

ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಖೈದಿಗಳಿಗೆ ಹಲ್ಲೆ ನಡೆಸಿದ್ದಾನೆ.

ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.

ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ. ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ.

driving
- Advertisement -

Related news

error: Content is protected !!