Wednesday, May 15, 2024
spot_imgspot_img
spot_imgspot_img

ಮಂಗಳೂರು: ಜೂನ್ ಒಂದರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಹೆಚ್‌ಪಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗುವುದು ಎಂದು ಮೀನುಗಾರಕಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮೀನುಗಾರರ ಹಿತದೃಷ್ಠಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ ಅಂದರೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. 10 ಹೆಚ್‌ಪಿ ವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ, ನಾಡದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಕಡಲ ಮೀನುಗಾರಿಕಾ ಕಾಯ್ದೆ 1986ರ ಅನ್ವಯ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!