Saturday, May 4, 2024
spot_imgspot_img
spot_imgspot_img

ಮಂಗಳೂರು: ಜ್ಯುವೆಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಪ್ರಕರಣ; ಶಂಕಿತ ಆರೋಪಿಯ ಪೋಟೋ ಬಿಡುಗಡೆ

- Advertisement -G L Acharya panikkar
- Advertisement -

ಮಂಗಳೂರು: ನಗರದ ಜ್ಯುವೆಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ನಡೆದ ಸಿಬ್ಬಂದಿ ಭೀಕರ ಕೊಲೆ, ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಪೊಲೀಸರು ಅಕ್ಕಪಕ್ಕದ ಅಂಗಡಿಗಳ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ. ಇದರನ್ವಯ ಚಿತ್ರವೊಂದನ್ನು ಬಿಡುಗಡೆ ಮಾಡಿದ್ದಾರೆ.

ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ.

ಘಟನೆ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 12. ಗ್ರಾಂ ತೂಕದ 50,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಲಾಗಿದೆ ಎಂದು ಮಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿ ಮಾಸ್ಕ್, ಕ್ಯಾಪ್ ಮತ್ತು ಜರ್ಕಿನ್ ಧರಿಸಿದ್ದ, ಆತ ಕೃತ್ಯ ವಸವಾಲೂ ಅದನ್ನು ಲ್ಯ, ಅಲ್ಲದೆ ಜುವೆಲರಿ ಅಂಗಡಿಯೊಳಗಿನ ಸಿಸಿ ಕೆಮರಾದ ದೃಶ್ಯ ಸಮರ್ಪಕವಾಗಿ ದೊರೆಯದೆ ಇರುವುದು ಕೂಡ ತನಿಖೆಗೆ ತೊಡಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

- Advertisement -

Related news

error: Content is protected !!