Saturday, June 28, 2025
spot_imgspot_img
spot_imgspot_img

ಮಂಗಳೂರು: ಡಿ.ಜೆ ಧನುಷ್‌ ನಾಪತ್ತೆ.!!

- Advertisement -
- Advertisement -
vtv vitla

ಮಂಗಳೂರು: ಪಬ್‌ನಲ್ಲಿ ಡಿಜೆ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದ ಧನುಷ್‌ ಕೆ.(21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಧನುಷ್‌ ಜ.15ರಂದು ರಾತ್ರಿ ಕೆಲಸ ಮುಗಿಸಿಕೊಂಡು ನಗರದ ಮೇರಿಹಿಲ್‌ನಲ್ಲಿರುವ ಮಾವನ ಮನೆಯಲ್ಲಿ ಉಳಿದುಕೊಂಡಿದ್ದರು.

ಮರುದಿನ ಬೆಳಗ್ಗೆ 7.45ಕ್ಕೆ ಮನೆಯಿಂದ ಹೊರಟು ತಂದೆಯ ಮನೆಗೆ ಹೋಗುವುದಾಗಿ ಮಾವನಲ್ಲಿ ಹೇಳಿ ಹೋಗಿದ್ದರು. ಆದರೆ ಅನಂತರ ಧನುಷ್‌ಗೆ ಕರೆ ಮಾಡಿದಾಗ ಆತನ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ ಎಂದು ಕಂಕನಾಡಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!