Wednesday, May 8, 2024
spot_imgspot_img
spot_imgspot_img

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಿದೇಶಿ ಪ್ರಜೆ ಸಹಿತ ಇಬ್ಬರ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಪತ್ತೆಯಾಗಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ವಿದೇಶಿ ಪ್ರಜೆ ಸಹಿತ ಇಬ್ಬರನ್ನು ಪೊಲೀಸರು ಸೋಮವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನೈಜೀರಿಯಾದ ಪ್ರಜೆ ಸ್ಟಾನ್ಲಿ ಜಿಮಾ ಮತ್ತು ಉಪ್ಪಳದ ರಮೀಝ್ ಎಂದು ಗುರುತಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಹಿಂದೆ ಪತ್ತೆಯಾಗಿದ್ದ 2 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ 235 ಗ್ರಾಂ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎಯನ್ನು ವಶಪಡಿಸಲಾಗಿತ್ತು. ಅಲ್ಲದೆ 5 ಮಂದಿಯನ್ನು ಬಂಧಿಸಲಾಗಿತ್ತು. ಆರೋಪಿಗಳಿಂದ 2 ಕಾರು, 9 ಮೊಬೈಲ್ ಸಹಿತ 24.82 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

- Advertisement -

Related news

error: Content is protected !!