Wednesday, May 1, 2024
spot_imgspot_img
spot_imgspot_img

ಮಂಗಳೂರು: ತಾಂಬೂಲ ಪ್ರಶ್ನೆ ಹಿನ್ನೆಲೆ-ಮಳಲಿ ಮಸೀದಿ ಸುತ್ತ ಇಂದು ನಿಷೇಧಾಜ್ಞೆ ಜಾರಿ; ಶಶಿಕುಮಾರ್

- Advertisement -G L Acharya panikkar
- Advertisement -

ಮಂಗಳೂರು: ನಗರ ಹೊರ ವಲಯದ ಮಳಲಿ ಮಸೀದಿ ನವೀಕರಣ ಸಂದರ್ಭ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಈಗಾಗಲೇ ಕೋರ್ಟ್ ಆದೇಶದಂತೆ ಕಾಮಗಾರಿ ಸ್ಥಗಿತಗೊಳಿಸಿ ಶಾಂತಿ ಕಾಪಾಡಲಾಗಿದೆ. ಮತ್ತೊಂದೆಡೆ ಹಿಂದೂ ಸಂಘಟನೆಗಳು ಇಂದು ತಾಂಬೂಲ ಪ್ರಶ್ನೆಗೆ ಮುಂದಾಗಿರುವ ಹಿನ್ನೆಲೆ ಮಳಲಿ ಮಸೀದಿ ಸುತ್ತ ಮುತ್ತ ಸೆಕ್ಷನ್ 144ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ತೆಂಕ ಉಳಿಪಾಡಿಯ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಪೂರ್ವ ವಿಚಾರ ತಿಳಿದುಕೊಳ್ಳುವ ನಿಟ್ಟಿನಲ್ಲಿ ತಾಂಬೂಲ ಪ್ರಶ್ನೆ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಸೀದಿ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

vtv vitla
vtv vitla

ಮೇ 24ರ ರಾತ್ರಿಯಿಂದ ಮೇ 26ರ ಬೆಳಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

- Advertisement -

Related news

error: Content is protected !!