Sunday, June 29, 2025
spot_imgspot_img
spot_imgspot_img

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಆಗಸ್ಟ್‌ 5 ರವರೆಗೆ ಮದ್ಯ ಮಾರಾಟ ನಿಷೇಧ

- Advertisement -
- Advertisement -

ಮಂಗಳೂರು: ಕಾನೂನೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಪ್ಯೂ ಜೊತೆಗೆ ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧವನ್ನು ಮತ್ತೆ ಆಗಸ್ಟ್‌ 5 ರವರೆಗೆ ಮುಂದುವರೆಸಿದೆ.

ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಹಿಂದೆ ಅಗಸ್ಟ್ 3 ರವರೆಗೆ ಜಿಲ್ಲೆಯಾದ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿತ್ತು.

ಇದೀಗ ಪರಿಸ್ಥಿತಿ ಇನ್ನೂ ತಿಳಿಯಾಗದ ಕಾರಣ ಮತ್ತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕೊರಿಕೆಯ ಮೇರೆಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಇಡೀ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧವನ್ನು ಆಗಸ್ಟ್ 5 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!