Thursday, April 25, 2024
spot_imgspot_img
spot_imgspot_img

ಮಂಗಳೂರು: ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ನಾಶ.!

- Advertisement -G L Acharya panikkar
- Advertisement -

ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಜೂ.26 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಪೈಕಿ ಪ್ರಸ್ತುತ ಠಾಣೆಯಲ್ಲಿ ವಿಲೇವಾರಿ ಮಾಡಲು ಬಾಕಿ ಇರುವ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶವನ್ನು ಪಡೆದು ನಾಶಪಡಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಯ 11 ಪ್ರಕರಣಗಳಲ್ಲಿ ಸುಮಾರು 23,75,300 ರೂ. ಮೌಲ್ಯದ 53 ಕೆ. ಜಿ. 128 ಗ್ರಾಂ ಮಾದಕ ವಸ್ತು ಗಾಂಜಾವನ್ನು ಮತ್ತು ಸುಮಾರು 30,00,000 ರೂ. ಮೌಲ್ಯದ 120 ಗ್ರಾಂ ಹೆರಾಯಿನ್ ಅನ್ನು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ. ರಾಮ್ಮಿ ಎನರ್ಜಿ ಮತ್ತು ಎನ್ನಿರೋನ್ ಮೆಂಟ್ ಲಿ. ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿ ಅಧ್ಯಕ್ಷ ಸೋನಾವಣೆ ಋಷಿಕೇಶ್ ಭಗವಾನ್, ಐಪಿಎಸ್ ಮತ್ತು ಸದಸ್ಯರುಗಳಾದ ಶಿವಾಂಶು ರಜಪೂತ್, ಐಪಿಎಸ್ ಸಹಾಯಕ ಪೊಲೀಸ್‌ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ಮತ್ತು ಪುತ್ತೂರು ಉಪವಿಭಾಗ ಪೊಲೀಸ್‌ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್ ರವರು ಉಪಸ್ಥಿತರಿದ್ದರು.

- Advertisement -

Related news

error: Content is protected !!