Thursday, May 9, 2024
spot_imgspot_img
spot_imgspot_img

ಮಂಗಳೂರು : ನಗರದಲ್ಲಿರುವ ಜಿಲ್ಲಾಕಾರಾಗೃಹಕ್ಕೆ ಪೊಲೀಸರು ದಿಢೀರ್ ಭೇಟಿ

- Advertisement -G L Acharya panikkar
- Advertisement -
vtv vitla

ಮಂಗಳೂರು : ನಗರದಲ್ಲಿರುವ ಜಿಲ್ಲಾಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗೃತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ 5 ಪೊಲೀಸ್ ಠಾಣೆಗಳ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಈ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ನಿನ್ನೆ ಮುಂಜಾನೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 60 ಮಂದಿಯ ಮನೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ದಾಳಿ ಪ್ರಾಮುಖ್ಯತೆ ಪಡೆದಿದೆ.

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ.

- Advertisement -

Related news

error: Content is protected !!