Wednesday, April 24, 2024
spot_imgspot_img
spot_imgspot_img

ಮಂಗಳೂರು: ನಾಲ್ಕು ಕೊಲೆ ಮಾಡಿದ ಆರೋಪಿ ಪ್ರವೀಣ್‌ಗೆ ಬಿಡುಗಡೆ ಭಾಗ್ಯ; ಬಿಡುಗಡೆ ಮಾಡದಂತೆ ಕುಟುಂಬಸ್ಥರಿಂದ ಪೊಲೀಸ್‌ ಕಮಿಷನರ್‌ಗೆ ಮನವಿ

- Advertisement -G L Acharya panikkar
- Advertisement -

ಮಂಗಳೂರು :1994ರ ಫೆ.23ರ ಮಧ್ಯ ರಾತ್ರಿ ವಾಮಂಜೂರಿನಲ್ಲಿದ್ದ ನಾಲ್ಕು ಕೊಲೆ ಮಾಡಿದ್ದ ಆರೋಪಿ ಪ್ರವೀಣ್‌ನನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ಕೇಂದ್ರ ಕಾರಾಗೃಹದಿಂದ ತೀರ್ಮಾನಿಸಲಾಗಿತ್ತು. ಇದಕ್ಕೆ ಕುಟುಂಬಸ್ಥರರು ಆಕ್ಷೇಪ ವ್ಯಕ್ತ ಪಡಿಸುತ್ತಿದ್ದು, ಯಾವುದೇ ಕಾರಣಕ್ಕೆ ಬಿಡುಗಡೆ ಮಾಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ಮನವಿ ಮಾಡಿ ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಹಿನ್ನೆಲೆ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವ ವಾಮಂಜೂರು ಕೊಲೆ ಪ್ರಕರಣ ಅಪರಾಧಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪ್ರವೀಣ್ ಕುಮಾರ್‌ನನ್ನು ಯಾವ ಕಾರಣಕ್ಕೂ ಬಿಡುಗಡೆ ಮಾಡಬಾರದು. “ನಾನು ಹೊರಗೆ ಬಂದ್ರೆ ಇನ್ನೂ ನಾಲ್ಕು ಜನರನ್ನ ಕೊಲೆ ಮಾಡ್ತೇನೆ” ಎಂದು ಈಗಾಗಲೇ ಹೇಳಿದ್ದರಿಂದ ಆತನನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದೆಂದು ಅಪರಾಧಿ ಪ್ರವೀಣ್ ಕುಮಾರ್ ಪತ್ನಿ, ಸಹೋದರ ಮತ್ತು ಕೊಲೆಯಾದ ಅಪ್ಪಿ ಶೇರಿಗಾರ್ತಿಯ ಪುತ್ರ ಸೀತಾರಾಮ ಸಹಿತ 30 ಮಂದಿಯ ತಂಡ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ಮನವಿ ಮಾಡಿ ಒತ್ತಾಯಿಸಿದ್ದಾರೆ.

1994ರ ಫೆ.23ರ ಮಧ್ಯರಾತ್ರಿ ವಾಮಂಜೂರಿನಲ್ಲಿದ್ದ ತನ್ನ ಸೋದರತ್ತೆ ಅಪ್ಪಿ ಶೇರಿಗಾರ್ತಿ, ಅವರ ಪುತ್ರ ಗೋವಿಂದ ಮತ್ತು ಸೋದರತ್ತೆಯ ಪುತ್ರಿ ಶಕುಂತಳಾ ಹಾಗೂ ಶಕುಂತಾಳರ ಪುತ್ರಿ ದೀಪಿಕಾಳನ್ನು ಕೊಲೆ ಮಾಡಿದ್ದ ಆರೋಪವು ಸಾಬೀತಾಗಿತ್ತು. ನ್ಯಾ ಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಬಳಿಕ ಪ್ರವೀಣ್ ಕುಮಾರ್ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಗಲ್ಲುಶಿಕ್ಷೆಯು ಜೀವಾವಧಿ ಶಿಕ್ಷೆಗೆ ಪರಿವರ್ತನೆಗೊಂಡಿತ್ತು. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಪ್ರವೀಣ್ ಕುಮಾರ್ ಇದ್ದಾನೆ.

ಅಲ್ಲದೆ ಸಂತ್ರಸ್ತರ ಹಾಗೂ ಪ್ರವೀಣ್‌ ಮನೆಯವರ ಹೇಳಿಕೆ ದಾಖಲಿಸುವಂತೆ ಸರಕಾರ ಪೊಲೀಸ್ ಇಲಾಖೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರವೀಣ್ ಕುಮಾರ್‌ ಸಂಬಂಧಿ ಹಾಗೂ ಅಪ್ಪಿ ಶೇರಿಗಾರ್ತಿಯ ಪುತ್ರ ಸೀತಾರಾಮ್, ಪ್ರವೀಣ್‌ ಪತ್ನಿ ಅನಸೂಯ ಪ್ರವೀಣ್ ಸಹೋದರ ಪ್ರದೀಪ್‌ ಹೇಳಿಕೆ ನೀಡಿದ್ದಾರೆ. ಪ್ರವೀಣ್ ಕುಮಾರ್ ಬಿಡುಗಡೆಯಾಗಿ ಬಂದರೆ ಮುಂದಿನ ದಿನಗಳಲ್ಲಿ ಮತ್ತೆ ಆತ ಕೊಲೆ ಮಾಡುವ ಸಾಧ್ಯತೆ ಇದ್ದು ಆತನನ್ನು ಬಿಡುಗಡೆ ಮಾಡಬಾರದು ಎಂದು ಪತ್ನಿ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದು ಕುಟುಂಬಿಕರು ಇಲ್ಲಿ ಬಂದು ಬಿಡುಗಡೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಘಟನೆ ನಡೆದಿರುವ ಗ್ರಾಮಾಂತರ ಎಸ್ಪಿ ಅವರಲ್ಲಿ ಮಾಹಿತಿ ಕಲೆ ಹಾಕುತ್ತೇನೆ. ಈ ವಿಚಾರದಲ್ಲಿ ಏನು ಮಾಡಬೇಕೆಂದು ನಿರ್ಧರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮನೆಮಂದಿಗೆ ಭರವಸೆ ನೀಡಿದ್ದಾರೆ.

- Advertisement -

Related news

error: Content is protected !!