Thursday, September 10, 2026
spot_imgspot_img
spot_imgspot_img

ಮಂಗಳೂರು: ನಿಗದಿತ ವೇಳೆಯಲ್ಲೇ ಅನಿಲ ಟ್ಯಾಂಕರ್ ಗಳ ಸಂಚಾರ; ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

- Advertisement -
- Advertisement -

ಮಂಗಳೂರು: ನಿಗದಿ ಪಡಿಸಿರುವ ವೇಳೆಯಲ್ಲಿಯೇ ಅನಿಲ್ ಟ್ಯಾಂಕರ್ ಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

vtv vitla
vtv vitla

ಜಿಲ್ಲೆಯನ್ನು ಹಾದೂಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ. ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ. ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅದನ್ನು ಉಲ್ಲಂಘಿಸಿದ್ದಲ್ಲೀ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.

ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ. ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ. ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.

ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲಿ ಜಿಪಿಎಸ್‍ ನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

- Advertisement -

Related news

error: Content is protected !!