Thursday, April 25, 2024
spot_imgspot_img
spot_imgspot_img

ಮಂಗಳೂರು: ನಿರಂತರ ಮಳೆ- ನೀರಿನ ಮಟ್ಟ ಹೆಚ್ಚಳ

- Advertisement -G L Acharya panikkar
- Advertisement -

ಮಂಗಳೂರು: ಜಿಲ್ಲೆಯಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ಹಲವೆಡೆ ಮನೆಗಳಿಗೆ ಹಾನಿಯಾಗಿದೆ. ಮೂಡುಬಿದಿರೆ ತಾಲ್ಲೂಕಿನಲ್ಲಿ ಒಂದು ಮನೆ ಸಂಪೂರ್ಣ ಹಾನಿಯಾಗಿದ್ದು, ಬಂಟ್ವಾಳದಲ್ಲಿ 2, ಉಳ್ಳಾಲ ಮತ್ತು ಮೂಲ್ಕಿ ತಾಲ್ಲೂಕಿನಲ್ಲಿ ತಲಾ ಒಂದು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಜಪ್ಪಿನಮೊಗರಿನ ಅಂಗವಿಕಲ ಮಹಿಳೆಯೊಬ್ಬರ ಮನೆಗೆ ನೀರು ನುಗ್ಗಿತ್ತು. ನಗರದ ನೆಕ್ಕರೆಮಾರ್ ಪ್ರದೇ ಶದಲ್ಲಿ ವಾಹನಗಳ ಒಡಾಟಕ್ಕಾಗಿ ನಿರ್ಮಿ ಸಿದ್ದ ಕಿರುಸೇತುವೆಯನ್ನು ಕುಸಿದಿದೆ.

ಮೇಯರ್‌ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯ ಪ್ರವೀಣ್‌ಚಂದ್ರ ಆಳ್ವ, ಕಾರ್ಯಪಾಲಕ ಎಂಜಿನಿಯರ್‌ ರವಿಶಂಕರ್‌ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಕೂಡಲೇ ತುರ್ತು ಕ್ರಮ ಕೈಗೊಂಡು ಸೇತುವೆ ದುರಸ್ತಿ ಮಾಡಲು ಸೂಚನೆ ನೀಡಿದರು.

ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.

ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಬಿಡುವು ಕೊಡದೆ ಸುರಿಯುತ್ತಿರುವ ಮಳೆಗೆ ನದಿ, ತೋಡು, ಹಳ್ಳಗಳು ತುಂಬಿ ಹರಿಯುತ್ತಿವೆ. ಕುಮಾರಧಾರ ನದಿಯಲ್ಲಿಯೂ ನೀರಿನ ಹರಿವು ಹೆಚ್ಚಳಗೊಂಡಿದ್ದು, ಸ್ನಾನ ಘಟ್ಟ ಮುಳುಗುವ ಭೀತಿಯಲ್ಲಿದೆ.

- Advertisement -

Related news

error: Content is protected !!