- Advertisement -
- Advertisement -


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ.
ಆ. 5ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.
ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ದ್ವಿಚಕ್ರ ವಾಹನ ಇಬ್ಬರು ಯುವಕರು ಸಂಚರಿಸುವುದನ್ನು ನಿರ್ಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಈಗಾಗಲೇ ಆದೇಶಿಸಿದ್ದರು.


- Advertisement -








