Wednesday, September 23, 2026
spot_imgspot_img
spot_imgspot_img

ಮಂಗಳೂರು: ಪಡಿತರ ವಿತರಣೆಯಲ್ಲಿ ಅಕ್ರಮ ಎಸಗಿರುವ ಆರೋಪ: ಶಾಸಕ ಭರತ್ ಶೆಟ್ಟಿ ದಿಢೀರ್ ಭೇಟಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಆದೇಶ

- Advertisement -
- Advertisement -

ಮಂಗಳೂರು: ಉತ್ತರ ವಿಧಾನ ಸಭಾ ಕ್ಷೇತ್ರದ ಕಾವೂರು 18 ನೇ ವಾರ್ಡಿನ ಆಕಾಶಭವನ ದಲ್ಲಿರುವ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ಸಿಬ್ಬಂದಿಯು ಅಕ್ರಮ ಎಸಗಿರುವ ಕುರಿತಾಗಿ ಜನರಿಂದ ಆರೋಪ ಬಂದ ಹಿನ್ನೆಲೆಯಲ್ಲಿ ಶಾಸಕ ಭರತ್ ಶೆಟ್ಟಿಯವರು ನೆನ್ನೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಜನರು ಕೊರೊನಾದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಅಪರಾಧಗಳನ್ನು ಸಹಿಸಲು ಸಾಧ್ಯವಿಲ್ಲ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಆದೇಶಿಸಿದರು. ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯೆ ಶ್ರೀಮತಿ ಗಾಯತ್ರಿ ರಾವ್ ಜೊತೆಗಿದ್ದರು..

- Advertisement -

Related news

error: Content is protected !!