Friday, March 29, 2024
spot_imgspot_img
spot_imgspot_img

ಮಂಗಳೂರು: ಪರಿಶಿಷ್ಟ ಜಾತಿ ಬಾಲಕಿಯ ಅತ್ಯಾಚಾರ ಪ್ರಕರಣ: ಸುಧಾಕರ ಪೂಜಾರಿಗೆ ಕಠಿಣ ಜೈಲು ಶಿಕ್ಷೆ

- Advertisement -G L Acharya panikkar
- Advertisement -

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ.


2014ರ ಡಿಸೆಂಬರ್ 6ರಂದು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡುವ ದುರುದ್ದೇಶದಿಂದ ಆಕೆಯನ್ನು ಮಂಗಳೂರಿನಿಂದ ಮೈಸೂರಿಗೆ ಅಪಹರಿಸಿಕೊಂಡು ಹೋಗಿ ಮೈಸೂರಿನ ಪಾಂಡವಪುರ ಬಸವನಗುಡಿ ದೇವಸ್ಥಾನದಲ್ಲಿ ಕರಿಮಣಿ ಸರ ಕಟ್ಟಿ ನಂತರ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇವಿನಕೊಪ್ಪ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಗಂಡ ಹೆಂಡತಿಯಂತೆ ವಾಸಿಸಿ‌ ಅಪ್ರಾಪ್ತೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ ಆರೋಪದಡಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಧಾಕರ ಪೂಜಾರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತನಿಖೆ ಪೂರ್ಣಗೊಳಿಸಿದ ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಆರ್.ಆರ್.ಕಲ್ಯಾಣ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಬಳಿಕ ವಾದ ಪ್ರತಿವಾದ ನಡೆದು ಆಗಸ್ಟ್ 12ರಂದು ನ್ಯಾಯಾಧೀಶೆ ಮಂಜುಳಾ ಇಟ್ಟಿ ತೀರ್ಪು ಪ್ರಕಟಿಸಿದ್ದು ಆರೋಪಿ ಸುಧಾಕರ ಪೂಜಾರಿಗೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಏಳು ವರ್ಷ ಮತ್ತು ಅಪಹರಣ ಆರೋಪಕ್ಕೆ ಸಂಬಂಧಿಸಿ ಐದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!