Thursday, May 2, 2024
spot_imgspot_img
spot_imgspot_img

ಮಂಗಳೂರು: ಪೂಜೆ ಮಾಡಲೆಂದು ಮನೆಗೆ ಪುರೋಹಿತನನ್ನು ಕರೆಸಿ ಹನಿಟ್ರ್ಯಾಪ್; ದಂಪತಿ ಅರೆಸ್ಟ್..!

- Advertisement -G L Acharya panikkar
- Advertisement -

ಮಂಗಳೂರು: ನಗರದ ಪದವಿನಂಗಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಪೂಜೆ ಮಾಡಲು ಪುರೋಹಿತರನ್ನು ಕರೆಸಿ ಹನಿಟ್ರ್ಯಾಪ್ ಮಾಡಿದ ದಂಪತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿವರ: ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ ವ್ಯಕ್ತಿಯೋರ್ವರನ್ನು ಭೇಟಿಯಾಗಿದ್ದ ದಂಪತಿ ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಮನೆಯಲ್ಲಿ ಪೂಜೆಯನ್ನು ಮಾಡಿಕೊಡಬೇಕೆಂದು ಪುರೋಹಿತರನ್ನು ಮನೆಗೆ ಕರೆಸಿಕೊಂಡಿದ್ದಾರೆ.

vtv vitla

ಈ ವೇಳೆ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವಿಡಿಯೋವನ್ನು ತೆಗೆದು ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಅಲ್ಲದೇ ಹೆದರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಹಣದ ಬೇಡಿಕೆ ಇಟ್ಟು ರೂ 15 ಲಕ್ಷ ನಗದು ಹಣ ಹಾಗೂ ಸುಮಾರು 34 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತೆಗಳಿಂದ ಹಣ ಪಡೆದಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ಪೊಲೀಸರು ತನಿಖೆ ಶುರು ಮಾಡಿದ್ದರು.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ಭವ್ಯ ಮತ್ತು ಕುಮಾರ್ ಅಲಿಯಾಸ್ ರಾಜು ದಂಪತಿಯನ್ನು ಬಂಧಿಸಿದೆ.

vtv vitla
vtv vitla

ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ. ಆರೋಪಿಗಳಿಂದ ರೂ 37,000/- ಮೌಲ್ಯದ ಎರಡು 2 ಚಿನ್ನದ ರಿಂಗ್, ನಗದು ಹಣ ರೂ. 31,000/-ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ.

ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಆರೋಪಿಗಳ ಪೈಕಿ ಕುಮಾರ್ ನು ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ಫಿರ್ಯಾದಿದಾರರ ಜೊತೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿಕೊಂಡು ಹಣ ವಸೂಲಿ ಮಾಡಿದ್ದಾನೆ.

vtv vitla
vtv vitla

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿದ್ದಾರೆ. ಅಲ್ಲದೆ ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿದ್ದಾರೆ.

ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳ ಪೈಕಿ ಭವ್ಯಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.

- Advertisement -

Related news

error: Content is protected !!