Friday, April 26, 2024
spot_imgspot_img
spot_imgspot_img

ಮಂಗಳೂರು: ಪೊದೆಯಲ್ಲಿ ದೇವರ ವಿಗ್ರಹ ಪತ್ತೆ..!

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರಿನ ಪಂಪ್ವೆಲ್-ಕುದ್ಕೋರಿ ಗುಡ್ಡೆ ಮುಖ್ಯ ರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ.

ಶಾರದಾ ದೇವಿಯ 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!