Saturday, April 20, 2024
spot_imgspot_img
spot_imgspot_img

ಮಂಗಳೂರು: ಪ್ರಾಂಚೈಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

- Advertisement -G L Acharya panikkar
- Advertisement -

ಮಂಗಳೂರು: ಗ್ರಾಮ ಒನ್ ಯೋಜನೆಯನ್ನು ರಾಜ್ಯದ 09 ಜಿಲ್ಲೆಗಳಲ್ಲಿ ಅನುಷ್ಟಾನ ಮಾಡುವ ಸಲುವಾಗಿ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ತಯಾರಿ ನಡೆಸಿದ್ದು, ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಪ್ರಾಂಚೈಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ಉದ್ದೇಶಿಸಿದೆ.

ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ ಗ್ರಾಮ ಒನ್ ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಯೋಜನೆ ರೂಪಿಸಿದ್ದು ಸೇವಾಸಿಂಧು ಯೋಜನೆ ಅಡಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿರುತ್ತದೆ.

ಈ ಯೋಜನೆಯಡಿಯಲ್ಲಿ 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅದೇ ರೀತಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದುಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದ್ದು, ಈ ಯೋಜನೆಯನ್ನು ಈಗಾಗಲೇ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸ್ಥಾಪಿಸಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಸಲುವಾಗಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನದಂಡಗಳು ಇಂತಿದೆ:
ಫ್ರಾಂಚೈಸಿ ಅರ್ಜಿದಾರರು ಡಿಪ್ಲೊಮೊ /ಐ.ಟಿ.ಐ/ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿದಾರರು ಸ್ವಂತ ಕಟ್ಟಡ ಹೊಂದಿರಬೇಕು ಅಥವಾ ಟೈಲ್ ಗ್ರಾನೈಟ್ , ಆರ್.ಸಿ.ಸಿ, ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮ-01 ಕೇಂದ್ರವನ್ನು ಸ್ಥಾಪಿಸಲು ತಯಾರಿರಬೇಕು. ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಉತ್ತಮ. ಮಹಿಳೆಯರಿಗೆ, ವಿಕಲ ಚೇತನರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಆಸಕ್ತ ಫ್ರಾಂಚೈಸಿಗಳು https://www.karnatakaone.gov.in/Public/ , GramOneFranchisee Terms ಅಂತರ್ಜಾಲದಲ್ಲಿ ಮೇ.4ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 917829274377, 9743669741, 9686579224 ಅಥವಾ ಇ-ಮೇಲ್ : [email protected] ಮೂಲಕ ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!